ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ

ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.

ಇಂದು ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು.

ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಪ್ರಧಾನಿಗೆ ಸಾಥ್ ನೀಡಿದರು.























































 
 
error: Content is protected !!
Scroll to Top