ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ

ಯುದ್ಧದ ನಡುವೆ ಮೋದಿಗೆ ಕರೆ ಮಾಡಿ 40 ನಿಮಿಷ ಚರ್ಚಿಸಿದ ಟ್ರಂಪ್‌

ನವದೆಹಲಿ: ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಅಮೆರಿಕದ ಹಾರ್ಮುಜ್ ಜಲಸಂಧಿ ದಿಗ್ಬಂಧನ ನಡುವೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ಮೋದಿ ಮಂಗಳವಾರ ದೂರವಾಣಿಯಲ್ಲಿ 40 ನಿಮಿಷ ಸಂಭಾಷಣೆ ನಡೆಸಿರುವುದು ಜಾಗತಿಕವಾಗಿ ಗಮನ ಸೆಳೆದಿದೆ. ಉಭಯ ರಾಷ್ಟ್ರಗಳ ನಾಯಕರು ಪಶ್ಚಿಮ ಏಷ್ಯಾದಲ್ಲಿ ಸದ್ಯ ನಡೆಯುತ್ತಿರುವ ಸಂಘರ್ಷ ಹಾಗೂ ವ್ಯಾಪಾರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಮಂಗಳವಾರ ಸಂಜೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯ ದಿಗ್ಬಂಧನ, ಇರಾನ್ ಮೇಲಿನ ದಾಳಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ 40 ನಿಮಿಷ ಮಾತುಕತೆ ನಡೆಸಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ಕರೆ ಇದಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ವಿಷಯದ ಕುರಿತು ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ಚರ್ಚಿಸಿದ್ದಾರೆ ಎಂದು ಅಮೆರಿಕದ ರಾಯಭಾರ ಕಚೇರಿ ತಿಳಿಸಿದೆ.























































 
 

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲವಾದ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಮಾರು 40 ನಿಮಿಷಗಳ ದೂರವಾಣಿ ಸಂಭಾಷಣೆ ನಡೆಸಿದರು. ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ.
ನನ್ನ ಸ್ನೇಹಿತರಾದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಫೋನ್ ಕರೆ ಬಂದಿತ್ತು. ಈ ವೇಳೆ ವಿವಿಧ ವಲಯಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಸಾಧಿಸಲಾದ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ. ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸಹ ನಾವು ಚರ್ಚಿಸಿದ್ದೇವೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿರಿಸುವ ಮಹತ್ವವನ್ನು ಒತ್ತಿ ಹೇಳಿದ್ದೇವೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕ ಮತ್ತು ಇರಾನ್ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸುಮಾರು 21 ಗಂಟೆಗಳ ನೇರ ಮಾತುಕತೆಗಳನ್ನು ನಡೆಸಿ, ಶಾಂತಿ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಭಾರತ ಮತ್ತು ಅಮೆರಿಕದ ನಡುವೆ ಈ ದೂರವಾಣಿ ಮಾತುಕತೆ ನಡೆದಿದೆ. ಇರಾನ್ ತನ್ನ ಪರಮಾಣು ಉತ್ಪಾದನೆಯನ್ನು ನಿಲ್ಲಿಸಲು ನಿರಾಕರಿಸಿದ್ದರಿಂದ ಶಾಂತಿ ಮಾತುಕತೆಗಳು ಫಲಪ್ರದವಾಗಲಿಲ್ಲ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಅಮೆರಿಕ ಚರ್ಚೆಗಳನ್ನು ಹಳಿತಪ್ಪಿಸಿದೆ ಎಂದು ಇರಾನ್ ಆರೋಪಿಸಿದೆ.

error: Content is protected !!
Scroll to Top