ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಉಜಿರೆಯಲ್ಲಿ ಕಳೆದ ವರ್ಷ ನಡೆದ ಗಲಾಟೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ವಿಚಾರಣೆಗೆ ಹಾಜರಾಗದ ಹಿಂದೂ ನಾಯಕ ಪುನೀತ್ ಕೆರೇಹಳ್ಳಿ ಅವರನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಮತ್ತು ಪುನೀತ್ ಕೆರೆಹಳ್ಳಿ ಅವರ ಬೆಂಬಲಿಗರ ನಡುವೆ 2025 ರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಬಂಧನ ಇದಾಗಿದೆ.

ಎ. 15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಕೆರೆಹಳ್ಳಿ ಅವರನ್ನು ಬಂಧಿಸಿರುವುದಾಗಿದೆ. ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.























































 
 

error: Content is protected !!
Scroll to Top