ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿ ಟಿ.ಇ. ಜೋಸೆಫ್ ಎಂಬಾತನಿಗೆ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು 50,000 ರೂ.ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಬಸವರಾಜ್ ಏಪ್ರಿಲ್ 10ರಂದು ಆರೋಪಿಯಾಗಿರುವ ಚಾರ್ಮಾಡಿ ನಿವಾಸಿ ಟಿ.ಇ. ಜೋಸೆಫ್‌ನನ್ನು (42) ದೋಷಿ ಎಂದು ತೀರ್ಪು ನೀಡಿದ್ದರು. ಏಪ್ರಿಲ್ 16ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಯಿತು. 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಇದೇ ವೇಳೆ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಕಠಿಣ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.























































 
 

ಈ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ಅವರು ನಡೆಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.

error: Content is protected !!
Scroll to Top