ಶಿವಮೊಗ್ಗ: ವೈನ್‌ಶಾಪ್‌ನಲ್ಲಿ ಗಲಾಟೆ ಮಾಡುತ್ತಿದ್ದವರನ್ನು ತಡೆಯಲು ಹೋದ ಯುವಕನ ಮೇಲೆ ದುಷ್ಟರು ಚೂರಿ ಇರಿದು ಗಾಯಗೊಳಿಸಿದ ಘಟನೆ ಹೊನ್ನಾಳಿ ರಸ್ತೆಯಲ್ಲಿ ನಡೆದಿದೆ.
ರಾಗಿಗುಡ್ಡದ ಸುನಿಲ್(27) ಎಂಬಾತನೇ ಚೂರಿ ಇರಿತಕ್ಕೆ ಒಳಗಾದ ಯುವಕ.
ಸುನಿಲ್ ಮತ್ತು ಸ್ನೇಹಿತರು ವೈನ್ ಶಾಪ್‌ಗೆ ತೆರಳಿದ್ದರು. ಈ ವೇಳೆ ಅಲ್ಲಿ ಓರ್ವ ಅಪರಿಚಿತ ವ್ಯಕ್ತಿ ಸುನಿಲ್‌ನ ಸ್ನೇಹಿತರ ಜೊತೆಗೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭಿಸಿದ್ದ. ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ಸುನಿಲ್ ಗಲಾಟೆ ಬಿಡಿಸಲು ಹೋಗಿದ್ದಾನೆ.
ಆ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಸುನಿಲ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಅವರ ತಲೆ, ಕುತ್ತಿಗೆ, ಮುಖಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























