ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು

ಯಾದಗಿರಿ: ಸ್ಲೀಪರ್ ಬಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತಿದ ಬೆಂಕಿ ಎರಡೂ ವಾಹನಗಳನ್ನು ಕ್ಷಣ ಮಾತ್ರದಲ್ಲಿ ಸುಟ್ಟು ಕರಕಲಾಗಿಸಿದ ಘಟನೆ ನಡೆದಿದೆ.

ಸುರಪುರದ ಶಾಂತಪುರ ಕ್ರಾಸ್‌‌ನ ಬೀದರ್ – ಬೆಂಗಳೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸು ಕಲಬುರ್ಗಿ ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ನಾಲ್ಕಕ್ಕೂ ಹೆಚ್ಚು ಜನರು ಸುಟ್ಟು ಕರಕಲಾಗಿದ್ದಾರೆ.

ಕಾರಿನಲ್ಲಿದ್ದ ಎಲ್ಲರೂ ಈ ದುರಂತದಲ್ಲಿ ಸಜೀವ ದಹನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾಗಿ ಹೇಳಲಾಗುತ್ತಿದೆ. ನಾಲ್ಕು ತಲೆ‌ ಬುರುಡೆಗಳು ಪತ್ತೆಯಾಗಿದ್ದು, ಇನ್ನುಳಿದ ಶವಗಳ ಅವಶೇಷಕ್ಕಾಗಿ ಹುಡುಕಾಟ ನಡೆದಿದೆ. ಆದರೆ ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಜೀವ ಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.























































 
 

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸುರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top