ರಾಮನನ್ನು ಹಣ್ಣು ಕಳ್ಳ ಎಂದಿದ್ದ ಪ್ರಕಾಶ್‌ರಾಜ್
ಬೆಂಗಳೂರು: ರಾಮಾಯಣದ ಕಥೆಯನ್ನು ವಿಕೃತವಾಗಿ ವ್ಯಾಖ್ಯಾನಿಸಿದ ಖಳನಟ ಪ್ರಕಾಶ್‌ರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಪ್ರಕಾಶ್‌ರಾಜ್ ಇತ್ತೀಚೆಗೆ ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮ ಉತ್ತರ ಭಾರತದವನು ಹಾಗೂ ರಾವಣ ದಕ್ಷಿಣ ಭಾರತದ ಆದಿವಾಸಿ. ರಾಮ, ರಾವಣನ ತೋಟದಲ್ಲಿದ್ದ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ರಾಮಾಯಣವನ್ನು ತನ್ನದೇ ಆದ ವಿಕೃತ ಕಲ್ಪನೆಯಲ್ಲಿ ವ್ಯಾಖ್ಯಾನಿಸಿದ್ದರು.
ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಒಂದಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.
ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ ಎಂದಿದ್ದಾರೆ ಪ್ರಕಾಶ್ ರಾಜ್. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ ಎಂದು ಹೇಳಲಾಗಿದೆ.

























