ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ವಿಟ್ಲ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ಧ 36 ಸಲ ಬಂಧನ ವಾರಂಟ್‌ ಜಾರಿಯಾಗಿತ್ತು ಎನ್ನಲಾಗಿದೆ.

ಏ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.























































 
 
error: Content is protected !!
Scroll to Top