ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

ಬರ್ತ್‌ಡೇ ಪಾರ್ಟಿಯಲ್ಲಿ ಸಂಭವಿಸಿದ ದುರಂತ

ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಗ್ರಾಮದ ಹೊರವಲಯದ ನಿರ್ಮಾಣ ಹಂತದ ಮನೆಯೊಂದರ ಬಳಿ ನಾನ್‌ವೆಜ್​ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿನ್ ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ವಾಪಸ್ಸಾಗಿದ್ದರು. ಶುಕ್ರವಾರ ಮುಂಜಾನೆ ಕಾಮಗಾರಿ ಮುಂದುವರಿಸಲು ಕೆಲಸಗಾರರು ಕಟ್ಟಡದ ಬಳಿ ಬಂದಾಗ ಸಚಿನ್ ಅಲ್ಲಿ ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ.























































 
 

ಈ ವಿಚಾರ ತಿಳಿದ ತಕ್ಷಣ ಸಚಿನ್‌ನ ಕುಟುಂಬದವರು ಆತಂಕಗೊಂಡು ಶವವನ್ನು ಶಿವಮೊಗ್ಗಕ್ಕೆ ಕೊಂಡೊಯ್ದಿದ್ದರು. ಘಟನೆಯ ಕುರಿತು ಗ್ರಾಮಸ್ಥರು ಕುಂಸಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಸಚಿನ್ ಮದ್ಯಪಾನ ಮಾಡಿದ್ದ. ಆತನ ಗಂಟಲಲ್ಲಿ ಆಹಾರ ಸಿಲುಕಿಕೊಂಡಿದ್ದೇ ಈ ಸಾವಿಗೆ ಕಾರಣ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top