ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ

ಮೇ 10ರಂದು ವಿವಾಹವಾಗಲಿದ್ದ ಓರ್ವ ಆರೋಪಿ

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಬಂಧಿತ ಆರೋಪಿಗಳು.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಏ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದಾಳೆ.























































 
 

ಈ ಬಗ್ಗೆ ಬಾಲಕಿಯ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ಏ.17ರಂದು ದೂರು ನೀಡಿದ್ದಾರೆ. ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶನಿವಾರ ಸಂಜೆ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಆರೋಪಿಗಳ ಪೈಕಿ ಸುಮಂತ್‌ಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ.

error: Content is protected !!
Scroll to Top