ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿದ್ದ ಆರೋಪಿಯನ್ನು ನಾಯಕನಹಟ್ಟಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಳ್ಳಕೆರೆ ತಾಲೂಕಿನ ಗಿಂತ ಕೊಲಮ್ಮನಹಳ್ಳಿಯ ಪಾಲಯ್ಯ ಜಿ. ಎಂದು ಗುರುತಿಸಲಾಗಿದೆ.
ಪಾಲಯ್ಯ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ. ಆರೋಪಿ ನೆಟ್ಟಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ 791 ಗಾಂಜಾ ಗಿಡಗಳಿಂದ ಸುಮಾರು 187 ಕೆಜಿ ಸೊಪ್ಪನ್ನು ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.

























