ಕೊಡಗು: ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ತಂಗಿದ್ದ ವಿದೇಶಿ ಮಹಿಐಎಯ ಮೇಲೆ ಹೋಂ ಸ್ಟೇ ಮಾಲೀಕನೇ ಅತ್ಯಾಚಾರ ಎಸಗರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಬಗ್ಗೆ ಟ್ವೀಟ್ ಮಾಡಿರುವ ಎಂಎಲ್ಸಿ ಸಿಟಿ ರವಿ, ಕೊಡಗಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಹಲ್ಲೆ ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಇದು ಎಂದಿಗೂ ಒಪ್ಪಲಾಗದ ಕೃತ್ಯ. ಇಂತಹ ಘಟನೆಗಳು ಭಾರತದ ‘ಅತಿಥಿ ದೇವೋ ಭವ’ ಎಂಬ ಸಂಸ್ಕೃತಿಯ ಆತ್ಮಕ್ಕೆ ಏಟು ನೀಡುತ್ತವೆ. ಇದು ಕೇವಲ ವ್ಯಕ್ತಿಯ ವಿರುದ್ಧದ ಅಪರಾಧವಲ್ಲ, ಬದಲಾಗಿ ನಮ್ಮ ರಾಷ್ಟ್ರದ ಪ್ರತಿಷ್ಠೆ ಮತ್ತು ಮೌಲ್ಯಗಳ ಮೇಲಿನ ಕಳಂಕ. ರಾಜ್ಯ ಸರ್ಕಾರ ತ್ವರಿತ ವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿಳಂಬವಿಲ್ಲದೆ ನ್ಯಾಯ ದೊರಕಿಸಿಕೊಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

























