ಈ ಸಲ ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಶೇ.94.1 ವಿದ್ಯಾರ್ಥಿಗಳು ತೇರ್ಗಡೆ

ಮೂವರು ವಿದ್ಯಾರ್ಥಿಗಳಿಗೆ ಭರ್ತಿ 625 ಅಂಕ-ರಾಜ್ಯದಲ್ಲೇ ಟಾಪರ್‌ಗಳು

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ), ಉತ್ಸವ ಪಾಟೀಲ (ಹಾಸನ) 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.























































 
 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

error: Content is protected !!
Scroll to Top