ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ಏಳು ಜನರ ಗುಂಪೊಂದು ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಸಮೀಪ ನಡೆದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬೆಳ್ತಂಗಡಿ ಆದಿಲ್ ಹುಸೈನ್ (21) ಎಂದು ಗುರುತಿಸಲಾಗಿದೆ.

ಈ ಹಿಂದೆ ನಡೆದಿದ್ದ ಜಗಳವೊಂದನ್ನು ಬಿಡಿಸಿದ್ದಕ್ಕೆ ‌ಪ್ರತಿಕಾರವಾಗಿ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಎ. 22 ರಂದು ತನ್ನ ಗೆಳೆಯರಿಬ್ಬರ ಜೊತೆಗೆ ಪುತ್ತೂರು ಬಸ್‌ಸ್ಟಾಂಡ್‌ನಲ್ಲಿ ‌ಟಿ ಕುಡಿಯುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.























































 
 

ಆದಿಲ್ ಹುಸೈನ್‌ಗೆ ಪರಿಚಯವಿರುವ ಬಿ.ಕೆ. ಮೊಯಿನುದ್ದೀನ್, ಮೋಹದ್ ಮತ್ತು ಅವರೊಂದಿಗೆ ಬಂದಿದ್ದ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಬಂದ ಆದಿಲ್ ಸ್ನೇಹಿತರಿಗೂ ಆರೋಪಿಗಳು ಜೀವಬೆದರಿಕೆ ಒಡ್ಡಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಬಂದು ಗಲಾಟೆ ಬಿಡಿಸಲು ಪ್ರಯತ್ನಿಸಿದಾಗ, ಆರೋಪಿಗಳು ಅವ್ಯಾಚ್ಯವಾಗಿ ಬೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಆದಿಲ್ ಸದ್ಯ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top