ಖರ್ಗೆ ‌ಪ್ರಧಾನಿ ಮೋದಿ ಅವರಲ್ಲಿ ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಬೆಂಗಳೂರು: ಪ್ರಧಾನಿ ಮೋದಿ ಅವರನ್ನು ಮಲ್ಲಿಕಾರ್ಜುನ ಖರ್ಗೆ ‘ಭಯೋತ್ಪಾದಕ’ ಎಂದು ಟೀಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ‌ಅವರು ಕೆಂಡಾಮಂಡಲವಾಗಿದ್ದಾರೆ. ಖರ್ಗೆ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ನಾವು ಖರ್ಗೆ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪರಿಸ್ಥಿತಿಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅವರ ಬಗ್ಗೆ ಕರುಣೆ ತೋರುತ್ತೇನೆ. ಅವರಿಗೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. 25 ಕ್ಕೂ ಹೆಚ್ಚು ದೇಶಗಳು ಪ್ರಧಾನಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿವೆ. ಇಡೀ ದೇಶವು ಎಐಸಿಸಿ ಅಧ್ಯಕ್ಷರಿಂದ ಕ್ಷಮೆಯಾಚನೆ ಬಯಸುತ್ತದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದ ಕುರಿತು ಪ್ರತಿಕ್ರಿಯಿಸಿ, ನಮಗೂ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಸದಸ್ಯರಾಗಿ ಮತ್ತು ಈ ದೇಶದ ಪ್ರಜೆಯಾಗಿ, ಮಲ್ಲಿಕಾರ್ಜುನ ಖರ್ಗೆ ಅವರು ತತ್ ಕ್ಷಣ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಚುನಾವಣಾ ಆಯೋಗವು ತನ್ನ ಕರ್ತವ್ಯವನ್ನು ನಿರ್ವಹಿಸಿದೆ ಎಂದು ತಿಳಿಸಿದ್ದಾರೆ.























































 
 
error: Content is protected !!
Scroll to Top