ಮಗು ಕರುಣಿಸಿದ ಪ್ರಕರಣ : ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದ ನ್ಯಾಯಾಲಯ

ಬೆಂಗಳೂರು: ಪುತ್ತೂರಿನ ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ ಜೀವನಾಂಶ ಪಾವತಿಸಲು ಹೈಕೋರ್ಟ್‌ ಆದೇಶಿಸಿ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು, ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಹೀಗಾಗಿ ಮುಂದಿನ ಆದೇಶದವರೆಗೂ ಮಗು ಹಾಗೂ ತಾಯಿಗೆ ಮಾಸಿಕ 75 ಸಾವಿರ ರೂಪಾಯಿ ಪಾವತಿಸುವಂತೆ ಅರ್ಜಿದಾರ ಕೃಷ್ಣ ಜೆ. ರಾವ್​ಗೆ ಹೈಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಸಂತ್ರಸ್ತೆ ಹಾಗೂ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ತಿಳಿಸಿದೆ.























































 
 

ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿದಾರ ಆರೋಪಿಯು ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯ ಖರ್ಚುಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಯಗಳಿಗೆ ನ್ಯಾಯಾಲಯ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ. ಜೊತೆಗೆ, ಅರ್ಜಿದಾರರು ಮುಂದಿನ ಒಂದು ವಾರದ ಒಳಗೆ ಸಂತ್ರಸ್ತೆಗೆ 75 ಸಾವಿರ ರೂ.ಗಳನ್ನು ಪಾವತಿಸಬೇಕು. ಅದಾದ ನಂತರ ಪ್ರತಿ ತಿಂಗಳು ಹಣ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ ಕೃಷ್ಣ ಜೆ.ರಾವ್ ಪರ ವಾದ ಮಂಡಿಸಿದ್ದ ವಕೀಲ ಪಿ.ಪಿ.ಹೆಗ್ಡೆ, 7 ವರ್ಷಗಳ ಪ್ರೀತಿ ಇತ್ತು, ಕ್ರಿಮಿನಲ್ ಕೇಸ್‌ನಿಂದಾಗಿ ರಾಜಿಯಾಗಿಲ್ಲ. ರಾಜಕೀಯ ವಿರೋಧಿಗಳು ಆರೋಪಿ ತಂದೆಯ ತೇಜೋವಧೆ ಮಾಡಿದ್ದಾರೆ. ಕ್ರಿಮಿನಲ್ ಕೇಸ್​​ನಲ್ಲೂ ಆರೋಪಿಗಳನ್ನಾಗಿಸಿದ್ದಾರೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. ಯುವತಿ ಮತ್ತು ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಆರೋಪಿ ಪರ ವಕೀಲರಿಗೆ ಪ್ರಶ್ನಿಸಿದ್ದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ಇದಕ್ಕೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಅಂದರೆ ಇಂದಿಗೆ ಮುಂದೂಡಿತ್ತು.

error: Content is protected !!
Scroll to Top