ಪುತ್ತೂರು : ಬೈಕ್ ಪಲ್ಟಿಯಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಹಿರೇಬಂಡಾಡಿ ನಿವಾಸಿ ಲಿಖಿತ್ ರೈ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮುಂಜಾನೆ ಸಾವನ್ನಪ್ಪಿದ್ದಾರೆ.
ಏಪ್ರಿಲ್ 22ರ ಸಂಜೆ ಕೊಯಿಲ-ಹಿರೇಬಂಡಾಡಿ ರಸ್ತೆಯ ಶಾಖಾಪುರ ಎಂಬಲ್ಲಿ ಲಿಖಿತ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿತ್ತು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸಾರ್ವಜನಿಕರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.
ಕಳೆದ ಕೆಲವು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಲಿಖಿತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 24ರ ಸಂಜೆ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಏಪ್ರಿಲ್ 25ರ ಮುಂಜಾನೆ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ.
ಮೃತ ಲಿಖಿತ್ ರೈ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಮುಗಿಸಿದ್ದು, ಮುಂದಿನ ಉನ್ನತ ವ್ಯಾಸಂಗಕ್ಕಾಗಿ ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.

























