ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

ಮಡಿಕೇರಿ: ಕೋವಿಯಿಂದ ಗುಂಡು ಹೊಡೆದುಕೊಂಡು ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಚೇರಂಬಾಣೆ ಗ್ರಾಮದಲ್ಲಿ ಸರ್ಕಾರಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರೋಹಿಣಿ(51) ಎಂಬವರೇ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ.

ಜೀವನದಲ್ಲಿ ಜಿಗುಪ್ಸೆ ಹೊಂದಿ ಅವರು ಈ ಕೃತ್ಯ ಎಂದಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.























































 
 

error: Content is protected !!
Scroll to Top