ಪ್ಲಾಸ್ಟಿಕ್‌ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 50 ಯುವತಿಯರು ಅದೃಷ್ಟವಶಾತ್‌ ಪಾರು

ಮಹಡಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪಿಜಿಯಲ್ಲಿದ್ದ ಯುವತಿಯರು

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ನಂದಿನಿ ಲೇಔಟ್ ವ್ಯಾಪ್ತಿಯ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ ಉರಿದಿವೆ.























































 
 

ಗೋಡೌನ್ ಪಕ್ಕದಲ್ಲೇ ಸುಮಾರು 50 ಯುವತಿಯರು ವಾಸವಿದ್ದ ಲೇಡಿಸ್ ಪಿಜಿ ಇತ್ತು. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಪಿಜಿಯ ಒಳಗೂ ಆವರಿಸುತ್ತಿದ್ದಂತೆ ಯುವತಿಯರು ತೀವ್ರ ಗಾಬರಿಗೊಂಡಿದ್ದಾರೆ. ಹೊರಗೆ ಬರಲು ದಾರಿಯಿಲ್ಲದೆ ಆತಂಕಗೊಂಡ ಕೆಲ ಯುವತಿಯರು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಪಿಜಿಯ ಕಾಂಪೌಂಡ್ ಗೋಡೆ ಹಾರಿ ಹೊರಬಂದಿದ್ದಾರೆ.

ಗೋಡೆ ಹಾರುವ ಮತ್ತು ಜಿಗಿಯುವ ಸಂದರ್ಭದಲ್ಲಿ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

error: Content is protected !!
Scroll to Top