ಪ್ರಿವೆಡ್ಡಿಂಗ್‌ ಶೂಟ್‌ಗೆ ಹೋಗುವಾಗ ಅಪಘಾತ : ವರ ಸಾವು

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆಏರಬೇಕಿದ್ದ ವರನೊಬ್ಬ ಪ್ರಿವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು ಎಲ್‌.ಎನ್. (29) ಎಂದು ಗುರುತಿಸಲಾಗಿದೆ.
ಮೇ 10ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಇಂದು ಬೆಳಗ್ಗೆ ಮನು ಪ್ರಿವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು.

ಕಾರು ಸಕಲೇಶಪುರದ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.























































 
 

ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top