ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (23) ಎಂಬ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.

ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೇಹಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲುಗೊಂಡು ಚಿಕಿತ್ಸೆಗೆ ಒಳಗಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಸಂಚಾರಿ ಠಾಣೆಯಲ್ಲಿ ಕೇಸು ದಾಖಲುಗೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.























































 
 
error: Content is protected !!
Scroll to Top