ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕಳೆದ ವರ್ಷ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಭವಿಸಿದ ಭೀಕರ ಹತ್ಯೆ

ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆಪರಾಧಿಗಳಾದ ರವಿ, ವಿಜಯ್, ಧನರಾಜ್, ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ತೀರ್ಪು ನೀಡಿದ್ದಾರೆ.

2025ರ ಅ.7ರಂದು ಹಳೆಯ ದ್ವೇಷದ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ವೆಂಕಟೇಶ ಹತ್ಯೆಯಾಗಿತ್ತು. ಪ್ರಕರಣ ಸಂಬಂಧ 12 ಆರೋಪಿಗಳನ್ನು ಪೊಲೀಸರು ಬಂಧಿಸಿ, 927 ಪುಟಗಳ ಚಾರ್ಜ್‌ಶೀಟ್ ಕೋರ್ಟ್‌ಗೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಗಂಗಾವತಿ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.























































 
 

ಇನ್ನುಳಿದ ಕಾರ್ತಿಕ್, ದಾದಪೀರ್, ಮಹಮ್ಮದ್ ಅಲ್ತಾಪ್, ಮಲ್ಲಿಕಾರ್ಜುನ, ಅಕ್ಕಿರೊಟ್ಟಿ ಶರಣ, ಚೈತ್ರಾ ಸೇರಿ 6 ಮಂದಿ ನಿರ್ದೋಷಿಗಳೆಂದು ಮಾ.23ರಂದು ನ್ಯಾಯಾಲಯ ತೀರ್ಪು ನೀಡಿತ್ತು.

error: Content is protected !!
Scroll to Top