ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ

13 ಕೋ. ರೂ. ಅಂದಾಜುಪಟ್ಟಿಗೆ ಸಚಿ ಸಂಪುಟ ಅನುಮೋದನೆ

ಮಂಗಳೂರು: ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ.





















































 
 

ಈಗಾಗಲೇ ರಸ್ತೆಯ 9.50 ಕಿ.ಮೀ. ಉದ್ದ ಚತುಷ್ಪಥ ರಸ್ತೆಯಾಗಿದೆ. ಉಳಿದ ಭಾಗದಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ 1.270 ಕಿ.ಮೀ. ಚತುಷ್ಪಥ ರಸ್ತೆ, ಆಯ್ದ ಭಾಗಗಳಲ್ಲಿ ತಡೆಗೋಡೆ, ಆರ್‌ಸಿಸಿ ಚರಂಡಿ ನಿರ್ಮಾಣ, ಭೂಸ್ವಾಧೀನ ವೆಚ್ಚಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸಚಿವ ಸಂಪುಟ 13 ಕೋಟಿ ರೂ. ವೆಚ್ಚದಲ್ಲಿ ಈ ಹೆದ್ದಾರಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

error: Content is protected !!
Scroll to Top