ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದವರ ವಾಹನದ ಟೈರ್ ಸ್ಪೋಟ: ಓರ್ವ ಸಾವು, ಹಲವರಿಗೆ ಗಾಯ

ಕೊಪ್ಪಳ: ವಾಹನದ ಚಕ್ರ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಏಳು ಜನರಿಗೆ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಅಂಜನಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರ ವಾಹನದ ಚಕ್ರ ಸ್ಪೋಟಗೊಂಡಿರುವುದಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲು‌ ಮಾಡಿಕೊಂಡಿದ್ದಾರೆ.





















































 
 
error: Content is protected !!
Scroll to Top