ಕೇಸರಿ ಪಕ್ಷಕ್ಕೆ ಬೋನಸ್ ಆಗಿ ದಕ್ಕಿದ ಒಂದು ಸ್ಥಾನ
ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. ಇಂದೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಇದಕ್ಕೂ ಮೊದಲೇ ಬಿಜೆಪಿಯ ಗೆಲುವನ್ನು ಸಾರಲಾಗಿದೆ.
ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಈ ಮೂಲಕ ಕ್ಲೈಮಾಕ್ಸ್ ತಲುಪಿದಂತಾಗಿದೆ. ರಾಜ್ಯದ ಚುನಾವಣೆ ಇತಿಹಾಸದಲ್ಲೇ ಚುನಾವಣೆ ನಡೆದ ಮೂರು ವರ್ಷಗಳ ಬಳಿಕ ಸೋತ ಅಭ್ಯರ್ಥಿಯೊಬ್ಬರು ಮರು ಮತ ಎಣಿಕೆಯಲ್ಲಿ ಗೆಲುವು ಸಾಧಿಸಿದ್ದು ಇದೇ ಮೊದಲು. ಈ ಫಲಿತಾಂಶ ಬಿಜೆಪಿ ಪಾಲಿಗೆ ಬಹಳ ಮಹತ್ವದ್ದಾಗಿದೆ. ಕಾಂಗ್ರೆಸ್ಗೆ ಒಂದು ಸ್ಥಾನ ಕಳೆದುಕೊಳ್ಳುವುದರಿಂದ ಸರ್ಕಾರದಲ್ಲಿ ಯಾವ ವ್ಯತ್ಯಾಸ ಆಗದಿದ್ದರೂ ಪ್ರತಿಷ್ಠೆಗೆ ಮಾತ್ರ ಭಾರಿ ಹೊಡೆತ ಬಿದ್ದಿದೆ.
ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದ ಕಾಂಗ್ರೆಸ್ ಈಗ ತಾನೇ ಮತಗಳ್ಳತನ ಮಾಡಿ ಸಿಕ್ಕಿಬಿದ್ದಂತಾಗಿದೆ. ಈ ಮೂಲಕ ಬಿಜೆಪಿಯ ಹೋರಾಟಕ್ಕೆ ಆನೆ ಬಲ ಬಂದಂತಾಗಿದೆ.
























