ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರಿಂದ 42,30,000 ರೂ. ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡಿದ್ದಾರೆ.

ಮೇ 2ರಂದು ಸಂಜೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ತಪಾಸಣೆ ನಡೆಸಿದರು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಲಾಯಿತು.

ಅವರು ಬಂಟ್ವಾಳ ಬೊಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಮೊಹಮ್ಮದ್ ಶಾಹೀಂ (19) ಎಂದು ಗುರುತಿಸಲಾಗಿದ್ದು, ವಿಚಾರಣೆ ವೇಳೆ ಬೆಂಗಳೂರಿನಲ್ಲಿ ಅಪರಿಚಿತ ನೈಜೀರಿಯಾ ಮೂಲದ ವ್ಯಕ್ತಿಯಿಂದ ಎಂ.ಡಿ.ಎಂ.ಎ ಖರೀದಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.





















































 
 

423 ಗ್ರಾಂ ಎಂ.ಡಿ.ಎಂ.ಎ, 3 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 46,25,000 ರೂ. ಎಂದು ಅಂದಾಜಿಸಲಾಗಿದೆ.

error: Content is protected !!
Scroll to Top