ಮಾದಕ ದ್ರವ್ಯ ಸೇವನೆ, ಹೆಲ್ಮೆಟ್ ಇಲ್ಲದ ದ್ವಿಚಕ್ರ ವಾಹನ ಚಾಲನೆ: ಮಹಮ್ಮದ್ ಅಸ್ಬೀರ್ ಪೊಲೀಸ್ ವಶಕ್ಕೆ

ವಿಟ್ಲ: ಪೊಲೀಸರು ವಿಟ್ಲದ ‌ನಾಲ್ಕು ಮಾರ್ಗ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಹೆಲ್ಮೆಟ್ ಧರಿಸದೆ ಯುವಕನೊಬ್ಬ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ವಿಚಾರಿಸಿದಾಗ ಮಾದಕ ದ್ರವ್ಯ ಸೇವಿಸಿರುವುದಾಗಿ ‌ತಿಳಿದು ಬಂದಿದೆ. ಸದ್ಯ ಆತನ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್(26) ಎಂದು ಗುರುತಿಸಲಾಗಿದೆ.

ಯುವಕ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಆತನನ್ನು ತಡೆದು ನಿಲ್ಲಿಸಿದ್ದಾರೆ. ಆದರೆ ಈ ವೇಳೆ ಆತ ಪೊಲೀಸರ ಜೊತೆಗೆ ಅಸಭ್ಯವಾಗಿ, ಅನುಚಿತವಾಗಿ ವರ್ತಿಸಿದ್ದಾನೆ. ಮಾದಕ ದ್ರವ್ಯ ಸೇವನೆ ಮಾಡಿರುವುದು ಸಹ ವೈದ್ಯಕೀಯ ತಪಾಸಣೆಯಲ್ಲಿ ಬಯಲಾಗಿದೆ.





















































 
 

ಆರೋಪಿಯ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top