ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಅಂಚೆ ಮತ ಎಣಿಕೆ ಕಾರ್ಯದಲ್ಲಿ ಆಕ್ರಮಣ ನಡೆದಿರುವುದಾಗಿ ಆರೋಪಿಸಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಮಾಜಿ ಶಾಸಕ ಡಿ. ಎನ್. ಜೀವರಾಜ್, ಆಗಿನ ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಮತ್ತು ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಚುನಾವಣಾ ಅಕ್ರಮದ ಹಿನ್ನೆಲೆ ಕಾನೂನು ಕ್ರಮ ಜರುಗಿಸಲಾಗಿತ್ತು. ಸದ್ಯ ಹೈಕೋರ್ಟ್ ಈ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ್ದು, ಇದು ಆರೋಪಿ ಸ್ಥಾನದಲ್ಲಿದ್ದವರಿಗೆ ಕೊಂಚ ನಿರಾಳತೆ ಒದಗಿಸಿದೆ. ಪ್ರಕರಣದ ಮುಂದಿನ ತನಿಖೆ, ಕಾನೂನು ಕಾರ್ಯಗಳು ಹೈಕೋರ್ಟ್ ನಿರ್ದೇಶನದಂತೆ ನಡೆಯಲಿವೆ.
























