ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ

ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ಇದರ ತಿಂಗಳ ಸರಣಿ ತಾಳಮದ್ದಳೆ ಕಾರ್ಯಕ್ರಮ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ಜರುಗಿತು.

ಜಾಂಬವತಿ ಕಲ್ಯಾಣ ಪ್ರಸಂಗದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ನಿತೀಶ್ ಕುಮಾರ್ ಎಂಕಣ್ಣಮೂಲೆ, ಹಿಮ್ಮೇಳದಲ್ಲಿ ಪದ್ಯಾಣ ಜಯರಾಮ್ ಭಟ್, ಸಮರ್ಥ ವಿಷ್ಣು ಕಡಂಬಳಿಕೆ, ಅನೀಶ್ ಕೃಷ್ಣ ಪುಣಚ, ಅರ್ಥದಾರಿಗಳಾಗಿ ಭಾಸ್ಕರ ಬಾರ್ಯ ಮತ್ತು ಭಾಸ್ಕರ ಶೆಟ್ಟಿ ಸಾಲ್ಮರ (ಶ್ರೀಕೃಷ್ಣ), ಗುಡ್ಡಪ್ಪ ಬಲ್ಯ(ಜಾಂಬವಂತ), ಜಯರಾಮ ಭಟ್ ದೇವಸ್ಯ(ಬಲರಾಮ ), ದಿವಾಕರ ಆಚಾರ್ಯ ಗೇರುಕಟ್ಟೆ (ನಾರದ) ಭಾಗವಹಿಸಿದ್ದರು.

ಟಿ. ರಂಗನಾಥ ರಾವ್ ಸ್ವಾಗತಿಸಿ ವಂದಿಸಿದರು.





















































 
 

error: Content is protected !!
Scroll to Top