ಚಿಕ್ಕಮಗಳೂರು: ಬಾತುಕೋಳಿಗಳನ್ನು ಹಿಡಿಯಲು ಕೆರೆಗೆ ಇಳಿದ ನಾಲ್ಕು ಮಂದಿ ಮಕ್ಕಳು ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಅರಳಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾರಂಜಿ ಕೆರೆಯ ಬಳಿ ಈ ದುರ್ಘಟನೆ ನಡೆದಿದೆ.
ಮೃತ ಮಕ್ಕಳನ್ನು ಮಹಾದಿಯಾ, ಅರುನುಸ್, ನಾಯುಸ್, ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಈ ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮಕ್ಕಳ ಜೊತೆಗೆ ಇದ್ದ ನಾಲ್ಕು ವರ್ಷದ ಅರ್ಮಾನ್ ಪಾರಾಗಿದ್ದಾಗಿ ತಿಳಿದು ಬಂದಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
























