ಹಾಸನ: ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಸೆಸ್ಕಾಂ ಕಿರಿಯ ಎಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ನುರನಕ್ಕಿ ಗ್ರಾಮದ ಸೆಸ್ಕಾಂನ ಕಿರಿಯ ಎಂಜಿನಿಯರ್ ದೇವರಾಜ್ ಅವರೇ ಲೋಕಾಯುಕ್ತ ಬಲೆಗೆ ಬಿದ್ದವರು. ಶಶಾಂಕ್ ಎಂಬವರು ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಒದಗಿಸುವ ಸಲುವಾಗಿ 5000 ರೂ. ಲಂಚಕ್ಕೆ ದೇವರಾಜ್ ಬೇಡಿಕೆ ಇಟ್ಟಿದ್ದರು.
ಲಂಚದ ಮೊತ್ತವನ್ನು ಪಡೆಯುವ ಸಂದರ್ಭದಲ್ಲಿ ದೇವರಾಜ್ ಅವರು ಲೋಕಾಯುಕ್ತರ ಬಲೆಗೆ ರೆಡ್‌ಹ್ಯಾಂಡ್ ಆಗಿ ಬಿದ್ದಿದ್ದಾರೆ. ಹಣದ ಸಮೇತ ಆರೋಪಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
























