ವಿದ್ಯುತ್ ತಗುಲಿ ಒಂಬತ್ತು ವರ್ಷದ ಹುಡುಗಿ ಮೃತ

ಚಿಕ್ಕೋಡಿ: ಒಂಬತ್ತು ವರ್ಷದ ಹುಡುಗಿಯೊಬ್ಬಳು ವಿದ್ಯುತ್ ಶಾಕ್ ತಗುಲಿದ ಪರಿಣಾಮ ಮನೆಯ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಸಾನ್ವಿ ಕಾಂಬಳೆ ಎಂದು ಗುರುತಿಸಲಾಗಿದೆ.

ಸಾನ್ವಿ ಇಂಗಳಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಈಕೆ ಮನೆಯ ಮೇಲೆ ಆಟವಾಡುತ್ತಿದ್ದ ‌ಸಮಯದಲ್ಲಿ ವಿದ್ಯುತ್ ತಗುಲಿದ್ದು, ಪರಿಣಾಮ ಮೇಲಿಂದ ಕೆಳಕ್ಕೆ ಬಿದ್ದಿದ್ದಾಳೆ. ಆ ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಹುಡುಗಿ ಮೃತಪಟ್ಟಿದ್ದಾಳೆ.





















































 
 

ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top