ಆರ್ಟ್ ಅಫ್ ಲಿವಿಂಗ್ ಧ್ಯಾನ ಮಂದಿರ ಲೋಕಾರ್ಪಣೆ ಕಾರ್ಯಕ್ರಮ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.
ಶ್ರೀ ರವಿಶಂಕರ್ ಗುರೂಜಿ ಜನ್ಮದಿನ ನಿಮಿತ್ತ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಈ ಸಂದರ್ಭದಲ್ಲಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಇದು ಸುಮಾರ 4 ಎಕರೆ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿರುವ ಬೃಹತ್ ಧ್ಯಾನಮಂದಿರವಾಗಿದ್ದು, ಅನೆಕ ಸೌಲಭ್ಯಗಳನ್ನು ಒಳಗೊಂಡಿದೆ. ಕಂಬ ರಹಿತ ಮುಖ್ಯ ಸಭಾಂಗಣ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಸಾವಿರಾರು ಮಂದಿಗೆ ಕುಳಿತು ಧ್ಯಾನ ಮಾಡಲು ಅವಕಾಶವಿದೆ.
























