ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಬಂಟ್ವಾಳ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ಹಲವು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಟ್ವಾಳದ ಕರಿಯಂಗಳ ನಿವಾಸಿ.

ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ‌ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈಗ ಆರೋಪಿ ಭಾರತಕ್ಕೆ ಹಿಂದಿರುಗಿದ್ದು, ಆತನ ಬರುವಿಕೆಯ ಮಾಹಿತಿ ಪಡೆದ ಪೊಲೀಸರು ಮುಂಬೈ ಸಹರಾ ಠಾಣಾ ಪೊಲೀಸರ ನೆರವಿನ ಜೊತೆಗೆ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.





















































 
 

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

error: Content is protected !!
Scroll to Top