ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಹಿರಿಯಡ್ಕ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ‌ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಪಕ್ಕಾಲು ಹೆಬ್ಬಾರು ಸೇತುವೆ ಬಳಿಯಲ್ಲಿ ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುರ್ಕಾಲುವಿನ ‌ಸುಹಾಸ್(21) ಮತ್ತು ಕಾಪು ಭರತ್ ನಗರದ ಲವ ಶೆಟ್ಟಿ(64) ಎಂದು ಗುರುತಿಸಲಾಗಿದೆ.

ಆರೋಪಿಗಳು ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದರು. ಪೆರ್ಡೂರು ಕಡೆಯಿಂದ ಹಿರಿಯಡ್ಕದತ್ತ ನಾಲ್ಕು ದನಗಳನ್ನು ಪಾಪಿಗಳು ಬೊಲೆರೋ ಗೂಡ್ಸ್ ‌ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದರು. ಈ ವಾಹನ ಪಕ್ಕಾಲು ‌ಹೆಬ್ಬಾರು ಸೇತುವೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.





















































 
 

ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.

error: Content is protected !!
Scroll to Top