ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದ ಪತಿಯೊಬ್ಬನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿರುವ ಘಟನೆ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ನಡೆದಿದೆ.
ಆರೋಪಿ ಪತಿಯನ್ನು ಸಂಜಯ್ ಎಂದು ಗುರುತಿಸಲಾಗಿದೆ.
ಸಂಜಯ್ ತನ್ನ ಪತ್ನಿಗೆ ಚಾಕು ಇರಿಯಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಹಾಗೆಯೇ ಸಂಜಯ್ಗೆ ಹಿಗ್ಗಾಮುಗ್ಗ ಬಾರಿಸಿದ್ದಾರೆ.
ಸಂಜಯ್ ಎರಡನೇ ಮದುವೆಯಾಗಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದ. ಇದರಿಂದ ಬೇಸತ್ತ ಪತ್ನಿ ಆತನಿಂದ ಬೇರೆಯಾಗಿ ವಾಸಿಸುತ್ತಿದ್ದಳು. ಪತ್ನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪತಿ ಬೈಕ್ನಲ್ಲಿ ಬಂದು ಆಕೆಗೆ ಚಾಕುವಿನಿಂದ ಹಲ್ಲೆ ನಡೆಸಲು ಪ್ರಯತ್ನ ಮಾಡಿದ್ದಾನೆ. ತಕ್ಷಣವೇ ಸಾರ್ವಜನಿಕರು ಆತನಿಂದ ಆಕೆಯನ್ನು ರಕ್ಷಿಸಿ, ಆತನಿಗೆ ಥಳಿಸಿರುವುದಾಗಿದೆ.
ಆರೋಪಿ ಪತಿ ಸಂಜಯ್ನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
























