ಇಂದಿನಿಂದ ತಮಿಳುನಾಡಿನಲ್ಲಿ ವಿಜಯಪಥ

ಕೊನೆಗೂ ಬಹುಮತ ಒಗ್ಗೂಡಿಸುಲ್ಲಿ ಯಶಸ್ವಿಯಾದ ವಿಜಯ್‌

ಚೆನ್ನೈ : ತಮಿಳುನಾಡಿನಲ್ಲಿ ಇಂದಿನಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ಶನಿವಾರ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಟಿವಿಕೆ 108 ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್ ಹಾಗೂ ಇತರ ಎಡಪಕ್ಷಗಳ ಬೆಂಬಲ ಸೇರಿ ಒಟ್ಟು ಸ್ಥಾನಗಳ ಸಂಖ್ಯೆ 121 ಆಗಿದೆ. ವಿಜಯುಗಿದ್ದ್‌ ಬಹುಮತದ ದೊಡ್ಡ ತೊಡಕು ನಿವಾರಣೆಯಾಗಿದ್ದು, ಮೇ 9ರ ಬೆಳಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಮಾರಂಭಕ್ಕೆ ಸಿದ್ಧತೆಗಳು ಆರಂಭವಾಗಿದೆ.





















































 
 

ನಟ, ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಶನಿವಾರ (ಮೇ 9) ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಜಯ್ ಶುಕ್ರವಾರ ಮೂರನೇ ಬಾರಿಗೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿ 121 ಶಾಸಕರ ಬೆಂಬಲ ಪತ್ರದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಬೆಂಬಲ ಪತ್ರಗಳನ್ನು ವಿಜಯ್ ಸಲ್ಲಿಸಿದರು. ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್​ವಾದಿ) ಟಿವಿಕೆಗೆ ಬೆಂಬಲ ನೀಡಿದ ನಂತರ ವಿಜಯ್ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತಿ ಫಿಕ್ಸ್ ಮಾಡಿದ್ದಾರೆ.

error: Content is protected !!
Scroll to Top