ಲೆ| ಜ| ಎನ್‌.ಎಸ್‌.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನ ನೇಮಕ ಮಾಡಿದೆ.

ಮೇ 30ರಂದು ಸಿಡಿಎಸ್‌ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಜನರಲ್‌ ಅನಿಲ್‌ ಚೌಹಾಣ್‌ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.

ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 1ರಂದು ಅವರು ಈ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು ಜುಲೈ 2024ರಿಂದ ಜುಲೈ 2025ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮಾರ್ಚ್ 2023ರಿಂದ ಜೂನ್ 2024 ರವರೆಗೆ ಸೆಂಟ್ರಲ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿಯೂ ಕಾರ್ಯನಿರ್ವಹಿಸಿದ ದಕ್ಷ ಅಧಿಕಾರಿಯಾಗಿದ್ದಾರೆ. ರಾಜಾ ಸುಬ್ರಮಣಿ ಅವರನ್ನು ಮೊದಲಿಗೆ 1985 ರ ಡಿ.14ರಂದು ಗರ್ವಾಲ್‌ ರೈಫಲ್ಸ್‌ನ 8ನೇ ಬೆಟಾಲಿಯನ್‌ಗೆ ನಿಯೋಜಿಸಲಾಗಿತ್ತು. ಒಟ್ಟು ಭಾರತೀಯ ಸೇನೆಯಲ್ಲಿ 39 ವರ್ಷಗಳ ಸೇವೆ ಸಲ್ಲಿಸಿದ್ದಾರೆ.





















































 
 

ಭಾರತೀಯ ಸೇನೆಯಲ್ಲಿನ ಅವರ 39 ವರ್ಷಗಳ ಸುದೀರ್ಘ ಮತ್ತು ನಿಷ್ಠಾವಂತ ಸೇವೆ ಪರಿಗಣಿಸಿ ಅವರಿಗೆ ಹಲವು ಪ್ರತಿಷ್ಠಿತ ಸೇನಾ ಗೌರವಗಳನ್ನು ನೀಡಲಾಗಿದೆ. ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಮತ್ತು ವಿಶಿಷ್ಟ ಸೇವಾ ಪದಕ ಸೇರಿದಂತೆ ಹಲವು ಶೌರ್ಯ ಮತ್ತು ಸೇವಾ ಪದಕಗಳು ಅವರ ಮುಡಿಗೇರಿವೆ. ಮೇ 30 ರಂದು ಜನರಲ್ ಅನಿಲ್ ಚೌಹಾಣ್ ನಿವೃತ್ತರಾದ ಬಳಿಕ ಸುಬ್ರಮಣಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

error: Content is protected !!
Scroll to Top