ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌

ಚಿನ್ನ ಖರೀದಿ ಬೇಡ ಎಂಬ ಕರೆಗೆ ಕಾಂಗ್ರೆಸ್‌ ವಿರೋಧಕ್ಕೆ ತಿರುಗೇಟು

ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಇದೇ ರೀತಿಯ ನಿಲುವು ತಳೆದಿದ್ದವು ಎಂದು ಹೇಳಿ ಮೋದಿ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

1967ರಲ್ಲಿ ಇಂದಿರಾ ಗಾಂಧಿಯವರು ಭಾರತೀಯರು ಚಿನ್ನ ಖರೀದಿಸುವುದನ್ನು ತಪ್ಪಿಸುವಂತೆ ಕೇಳಿದಾಗ ಅದನ್ನು “ರಾಷ್ಟ್ರೀಯ ಶಿಸ್ತು” ಎಂದು ಕರೆಯಲಾಯಿತು. 2013ರಲ್ಲಿ ಹಣಕಾಸು ಸಚಿವ ಪಿ.ಚಿದಂಬರಂ ಚಿನ್ನ ಖರೀದಿಸಬೇಡಿ ಎಂದು ಜನರಲ್ಲಿ ಮನವಿ ಮಾಡಿದಾಗ ”ಆರ್ಥಿಕ ಜವಾಬ್ದಾರಿ” ಎಂದು ಕರೆಯಲಾಯಿತು. ಈಗ ಮೋದಿಯವರು ಇದೇ ರೀತಿಯ ಮನವಿ ಮಾಡಿದಾಗ ಕಾಂಗ್ರೆಸ್ ನಾಯಕರು ಏನೋ ಅನಾಹುತ ಸಂಭವಿಸಿದೆ ಎಂಬಂತೆ ವರ್ತಿಸುತ್ತಾರೆ. ಬಹುಶಃ ಸಮಸ್ಯೆಯೆಂದರೆ ಪ್ರಧಾನಿ ಮೋದಿಜಿಯವರ ನೇತೃತ್ವದಲ್ಲಿ ಭಾರತದ ಆರ್ಥಿಕತೆಯನ್ನು ವಿಶ್ವಾಸ, ವಿಶ್ವಾಸಾರ್ಹತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯೊಂದಿಗೆ ನಿರ್ವಹಿಸಲಾಗುತ್ತಿದೆ ಎಂಬ ಅಂಶವನ್ನು ಅವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಶೋಕ್‌ ತಿರುಗೇಟು ನೀಡಿದ್ದಾರೆ.





















































 
 

ಈಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಮತ್ತು ರೂಪಾಯಿ ಮೌಲ್ಯವನ್ನು ಹೆಚ್ಚಿಸಲು ಇದೇ ರೀತಿಯ ಆರ್ಥಿಕ ಶಿಸ್ತಿಗೆ ಕರೆ ನೀಡಿದಾಗ, ಕಾಂಗ್ರೆಸ್ ನಾಯಕರು ಇದುವರೆಗೂ ಸಂಭವಿಸದ ಏನೋ ಒಂದು ವಿಚಿತ್ರ ನಡೆಯೆಂಬಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

error: Content is protected !!
Scroll to Top