ಇನ್ನೊಬ್ಬರ ರಕ್ಷಣೆಗೆ ಆದ್ಯತೆಯಿರಲಿ : ಡಾ.ಸಾಯಿಗೀತಾ ಜ್ಞಾನೇಶ್

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ

ಸುಳ್ಯ: ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಬೆಳ್ಳಿಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ“ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸಾಯಿಗೀತಾ ಜ್ಞಾನೇಶ್ ಮಾತನಾಡಿ, ಆಕಸ್ಮಿಕ ಅವಘಡಗಳಾದಾಗ ವ್ಯಕ್ತಿ ತನ್ನ ರಕ್ಷಣೆಯೊಂದಿಗೆ ಇನ್ನೊಬ್ಬನ ರಕ್ಷಣೆಗೆ ಆದ್ಯತೆಯಲ್ಲಿ ಇಳಿಯುವ ಮೂಲಕ ಜೀವ ರಕ್ಷಣೆಯಲ್ಲಿ ತೊಡಗಬೇಕು ಎಂದು ಕರೆಯಿತ್ತು, ಬಿಸಿಗಾಳಿಯಿಂದ ರಕ್ಷಸಿಕೊಳ್ಳುವ ವಿಧಾನಗಳನ್ನು ತಿಳಿಸಿದರು.





















































 
 

ಕಾಲೇಜಿನ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್,
ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ., ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ., ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಸದಸ್ಯರಾದ ಹವ್ಯಾ, ಭೂಮಿಕಾ ರೈ ಸಿ., ಧೃತಿ ಎಂ. ಪ್ರಾರ್ಥಿಸಿದರು. ಸಿಂಚನ ಎನ್. ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ, ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು., ಸಿಂಚನ ಎ.ಪಿ. ವಂದಿಸಿದರು. ಕಲ್ಪಿತ ಎಂ. ಮತ್ತು ದೀಪ ಕೆ. ಕಾರ್ಯಕ್ರಮ ನಿರೂಪಿಸಿದರು. ಯುವ ರೆಡ್ ಕ್ರಾಸ್ ಸದಸ್ಯರು, ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಕಾಲೇಜಿನ ಬೋಧಕ-ಬೋಧಕೇತರ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

error: Content is protected !!
Scroll to Top