ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

ಮನೆಗೆ ಹೋಗಲು ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಬಲವಂತವಾಗಿ ಬಸ್‌ಗೆ ಹತ್ತಿಸಿಕೊಂಡು ಕೃತ್ಯ

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್‌ನನ್ನು ಬಂಧಿಸಿದ್ದಾರೆ.

ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಒಂದು ಸ್ಲೀಪರ್ ಬಸ್ ಆಕೆಯ ಪಕ್ಕ ನಿಂತಿತ್ತು. ಬಸ್ಸಿನ ಬಾಗಿಲ ಬಳಿ ನಿಂತಿದ್ದ ಕಂಡಕ್ಟರ್ ಬಳಿ ಮಹಿಳೆ ಸಮಯ ಕೇಳಲೆಂದು ಧಾವಿಸಿದ ವೇಳೆ ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ.





















































 
 

ದೆಹಲಿಯ ರಾಣಿಬಾಗ್ ಪ್ರದೇಶದಲ್ಲಿ ಕೃತ್ಯ ಎಸಗಲಾಗಿದ್ದು, ಸುಮಾರು 7 ಕಿ.ಮೀವರೆಗೆ ಬಸ್ ಚಲಿಸುತ್ತಲೇ ಇತ್ತು. ತಡರಾತ್ರಿ 2 ಗಂಟೆಯ ಸುಮಾರಿಗೆ ಮಹಿಳೆಯನ್ನು ಬಸ್ಸಿನಿಂದ ಹೊರದಬ್ಬಿದ್ದಾರೆ. ಇದರಿಂದ ಮಹಿಳೆಗೆ ಗಾಯಗಳಾಗಿವೆ. ಘಟನೆ ಕುರಿತು ಹೆಚ್ಚಿನ ತನಿಖೆಗಾಗಿ ಕೃತ್ಯಕ್ಕೆ ಬಳಸಿದ ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

error: Content is protected !!
Scroll to Top