ದೇವಸ್ಥಾನಕ್ಕೆ ಬಡಿದ ಸಿಡಿಲು : ಅಪಾರ ಹಾನಿ

ನಾಲ್ಕು ವರ್ಷದ ಹಿಂದೆಯಷ್ಟೇ ಬ್ರಹ್ಮಕಲಶವಾಗಿದ್ದ ದೇಗುಲ

ಬಂಟ್ವಾಳ: ದೇವಸ್ಥಾನಕ್ಕೆ ಸಿಡಿಲು ಬಡಿದು ಕೋಟ್ಯಾಂತರ ರೂ. ನಷ್ಟ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ಮಣಿ ನಾಲ್ಕೂರು ಗ್ರಾಮದ ಇಳಿಯೂರು ಎಂಬಲ್ಲಿ ಶನಿವಾರ ಸಂಜೆ ವೇಳೆ ನಡೆದಿದೆ. ಮಣಿನಾಲ್ಕೂರು ಗ್ರಾಮದಲ್ಲಿರುವ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಗೋಪುರಕ್ಕೆ ಸಿಡಿಲು ಬಡಿದು ಸುಮಾರು 1 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಸಂಜೆ ಸುಮಾರು 4.30ರ ವೇಳೆಗೆ ಸುರಿದ ಗಾಳಿ ಮಳೆಯ ನಡುವೆ ಸಿಡಿಲು ಬಡಿದಿದೆ.

ಸಿಡಿಲಿನ ಬಡಿತಕ್ಕೆ ದೇವಸ್ಥಾನದ ಗರ್ಭ ಗುಡಿಯ ಮೇಲಿನ ಗೋಪುರದ ಕಲ್ಲುಗಳು ಛಿದ್ರಗೊಂಡು ನೆಲಕ್ಕಪ್ಪಳಿಸಿದೆ. ನಾಲ್ಕು ವರ್ಷಗಳ ಹಿಂದೆಯಷ್ಟೆ ದೇವಸ್ಥಾನ ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿತ್ತು. ಇದೀಗ ದೇವಸ್ಥಾನದ ದೇವರ ಗರ್ಭಗುಡಿಗೆ ಹಾನಿಯಾಗಿದ್ದು,ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ.





















































 
 

ಘಟನೆ ಸಂಭವಿಸಿದ ವೇಳೆಯಲ್ಲಿ ದೇವಸ್ಥಾನದಲ್ಲಿ ಯಾರೂ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸಿಡಿಲಿನ ಆಘಾತದಿಂದ ಗರ್ಭಗುಡಿಯ ಮೇಲಿನ ಗೋಪುರದ ಕೆಲವು ಭಾಗಗಳಿಗೆ ಹಾನಿಯಾಗಿದೆ. ಘಟನೆ ಕುರಿತು ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ. ಅಮೀನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳೀಯ ಭಕ್ತರು ಹಾಗೂ ಗ್ರಾಮಸ್ಥರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

error: Content is protected !!
Scroll to Top