ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ತಡೆ

ಸರ್ಕಾರದ ಜೊತೆ ಮಾತುಕತೆ ನಡೆಸಲು ಸೂಚನೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಮೇ 20ರಂದು (ನಾಳೆ) ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

ಮುಷ್ಕರ ನಡೆಸದಂತೆ ಸೂಚನೆ ನೀಡಿರುವ ಹೈಕೋರ್ಟ್‌ ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿ, ಗುರುವಾರಕ್ಕೆ (ಮೇ 21) ವಿಚಾರಣೆ ಮುಂದೂಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೂ ನೋಟಿಸ್‌ ಜಾರಿಗೊಳಿಸಿದೆ.





















































 
 

ವಿವಿಧ ಬೇಡಿಕರಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಮುಷ್ಕರಕ್ಕೆ ಎಲ್ಲ ತಯಾರಿ ನಡೆಸಲಾಗಿತ್ತು. ಆದರೆ ಮುಷ್ಕರ ನಡೆಸುವ ಕುರಿತು ಸಾರಿಗೆ ನೌಕರರ ಯೂನಿಯನ್‌ಗಳಲ್ಲೆ ಭಿನ್ನಾಭಿಪ್ರಾಯಗಳಿದ್ದವು.

ಸರ್ಕಾರವೂ ಮುಷ್ಕರ ನಡೆಸದಂತೆ ಕಠಿಣ ಎಚ್ಚರಿಕೆ ನೀಡಿತ್ತು. ಈ ಮಧ್ಯೆ ಹೈಕೋರ್ಟ್‌ ಮಧ್ಯೆ ಪ್ರವೇಶಿಸಿ ನಾಳೆ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.

error: Content is protected !!
Scroll to Top