ಮತ್ತೆ ಶುರುವಾದ ಬುರುಡೆ ಪ್ರಕರಣದ ತನಿಖೆ : ಎಫ್‌ಎಸ್‌ಎಲ್‌ ತಂಡದಿಂದ ಪರಿಶೀಲನೆ

ಬುರುಡೆ ತೆಗೆದ ಸ್ಥಳದಲ್ಲಿ ಘಟನೆಯನ್ನು ಮರಸೃಷ್ಟಿಸಿ ತನಿಖೆ

ಮಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿಗೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ.

ಮೂವರು ಅಧಿಕಾರಿಗಳನ್ನೊಳಗೊಂಡ ಎಫ್‌ಎಸ್‌ಎಲ್‌ ಅಧಿಕಾರಿಗಳ ತಂಡ ಗುರುವಾರ ಬೆಂಗಳೂರಿನಿಂದ ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಸಿಕ್ಕಿದ್ದ ಜಾಗದಲ್ಲಿ ಪರಿಶೀಲನೆ ನಡೆಸಿದೆ. ಅಲ್ಲದೇ ಆರೋಪಿ ಪ್ರದೀಪ್ ಕುಲಾಲ್‌ನನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಲಾಗಿದೆ.





















































 
 

ಪ್ರದೀಪ್‌ ಕುಲಾಲ್‌ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರದೀಪ್‌ ಕುಲಾಲ್‌ ಬಿಎನ್‌ಎಸ್‌ ಸೆಕ್ಷನ್‌ 183 ಅಡಿ ತಪ್ಪೊಪ್ಪಿಗೆ ನೀಡಿದ್ದ. ರಾತ್ರಿ ಹೊತ್ತು ಕಾಡಿನಲ್ಲಿ ಬುರುಡೆ ತೆಗೆಯುತ್ತಿದ್ದ ವಿಡಿಯೋದಲ್ಲೂ ಪ್ರದೀಪ್‌ ಕಾಣಿಸಿಕೊಂಡಿದ್ದ.

ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರುಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತಪಡಿಸಿ ಎಸ್ಐಟಿಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2.40ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್‌ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ. ಆರಂಭದಲ್ಲಿ ನಡೆಸಲಾಗಿದ್ದ ಮಹಜರು ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಇದೀಗ ಮತ್ತೆ ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ

ಬುರುಡೆ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, 4 ತಿಂಗಳ ಹಿಂದೆ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17 ರಂದು 5 ಅಸ್ಥಿಪಂಜರ, ಸೆ.18 ರಂದು 2 ಅಸ್ಥಿಪಂಜರ ಪತ್ತೆಯಾಗಿತ್ತು. ಎಲ್ಲವೂ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿತ್ತು. ಈ ಅಸ್ಥಿಗಳನ್ನು ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕೇಂದ್ರಕ್ಕೆ ಅಸ್ಥಿಪಂಜರಗಳ ರವಾನೆ ಮಾಡಲಾಗಿತ್ತು.

ಇದಕ್ಕೂ ಮುನ್ನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಕಳೆದ ನ.20ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು. ಈ ವೇಳೆ ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸುವಂತೆ ಕೋರ್ಟ್‌ ಸೂಚನೆ ನೀಡಿತ್ತು.

error: Content is protected !!
Scroll to Top