ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ, ಇನ್ನೋರ್ವ ಪರಾರಿ

ವಧಿಸಲು ಎರಡು ಜಾನುವಾರುಗಳ ಅಕ್ರಮ ಸಾಗಾಟ

ವಿಟ್ಲ: ಇಲ್ಲಿನ ಕೊಳ್ನಾಡು ಸಮೀಪ ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ವಧಿಸುವ ಉದ್ದೇಶದಿಂದ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಬಶೀರ್ ಬಂತಾ ಪರಾರಿಯಾಗಿದ್ದಾನೆ‌ ಎಂದು ಪೊಲೀಸರು ತಿಳಿಸಿದ್ದು, ಚಾಲಕ ಬಾಳೆಪುಣಿ ನಿವಾಸಿ ಹನೀಫ್ (44) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಮೇ 21ರಂದು ಬೆಳಗ್ಗೆ ಅಕ್ರಮ ಗೋ ಸಾಗಾಟದ ಮಾಹಿತಿ ಪಡೆದ ಪೊಲೀಸರು ಪಂಜರಕೋಡಿ ಎಂಬಲ್ಲಿಗೆ ತೆರಳಿ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿದರು. ಈ ವೇಳೆ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರಿನಲ್ಲಿದ್ದ ಬಶೀರ್ ಎಂಬಾತನು ಸ್ಥಳದಲ್ಲಿದ್ದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವಂತೆ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಪರಾರಿಯಾಗಿದ್ದಾನೆ.‌ ಬಳಿಕ ಜಾನುವಾರು ಸಾಗಿಸುತ್ತಿದ್ದ ಪಿತಪನ್ನು ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿರುವುದು ಪತ್ತೆಯಾಗಿದೆ. ಈ ಬಗ್ಗೆ ಪಿಕಪ್ ಚಾಲಕನಲ್ಲಿ ವಿಚಾರಿಸಿದಾಗ ಯಾವುದೇ ಪರವಾನಗಿ ಪಡೆಯದೆ ಜಾನುವಾರುಗಳನ್ನು ವಧೆ ಮಾಡಲು ಸಾಗಿಸುತ್ತಿರುವುದಾಗಿ ತಿಳಿದು ಬಂತು. ಕೃತ್ಯಕ್ಕೆ ಬಳಸಿದ ವಾಹನ, ಎರಡು ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಚಾಲಕ ಹನೀಪ್ ಹಾಗೂ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





















































 
 
error: Content is protected !!
Scroll to Top