ಕ್ರೂಸರ್‌- ಲಾರಿ ಡಿಕ್ಕಿ : ಒಂದೇ ಕುಟುಂಬದ ಐವರು ಸಾವು

ಕಲಬುರಗಿ: ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ.

ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದೆ.

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































 
 
error: Content is protected !!
Scroll to Top