ಮಂಗಳೂರು: ಕಾರ್ ಮತ್ತು ಬೈಕ್ ನಡುವೆ ಸೋಮಂತಡ್ಕ ಅಗರಿ ಕ್ರಾಸ್ ಸಮೀಪ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ (36) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿಯ ಕಳೆಂಜ ನಿವಾಸಿಯಾದ ಇವರು ಉಜಿರೆಯಲ್ಲಿ ತಮ್ಮದೇ ಸ್ಟುಡಿಯೋ ನಡೆಸುತ್ತಿದ್ದರು. ಮೇ 24 ರಂದು ಉಜಿರೆಯಿಂದ ಕಕ್ಕಿಂಜೆಗೆ ಬೈಕಿನಲ್ಲಿ ತೆರಳುವ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು, ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದ ಹಾಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
























