ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ ಗವರ್ನರ್‌ ನಡೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.

ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ತಡರಾತ್ರಿ 11.45ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ.





















































 
 

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಲೋಕಭವನ ಗುರುವಾರ ಬೆಳಗ್ಗೆ 11.30ಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶವನ್ನೂ ಕಲ್ಪಿಸಿತ್ತು. ಸಿಎಂ ಭೇಟಿಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ರಾಜ್ಯಪಾಲರು ಮಧ್ಯರಾತ್ರಿಯೇ ರಾಜಧಾನಿ ತೊರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯಪಾಲರು ಇಂದೇ ಮುಂಬೈನಿಂದ ಮರಳಿ ಬರುತ್ತಾರಾ ಎನ್ನುವುದರ ಬಗ್ಗೆ ಖಚಿತತೆ ಇಲ್ಲ. ಒಂದು ವೇಳೆ ಮರಳಿ ಬಂದರೂ ಮಧ್ಯಾಹ್ನ 3 ಗಂಟೆಯ ನಂತರ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.

error: Content is protected !!
Scroll to Top