ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಮದ್ಯಾಹ್ನದ ಬಳಿಕ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸುವ ಸಲುವಾಗಿ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರು ನಗರದಲ್ಲಿರದ ಕಾರಣ ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ.
ಮೂಲಗಳ ಪ್ರಕಾರ ರಾಜ್ಯಪಾಲರು ರಾಜ ಭವನ ಕ್ಕೆ ಹಿಂದಿರುಗಿದ ನಂತರವಷ್ಟೇ ರಾಜೀನಾಮೆ ಪತ್ರ ಅಂಗೀಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಸಾಂವಿಧಾನಿಕ ಪ್ರಕ್ರಿಯೆಗಳ ನಂತರ ಅಂತಿಮ ಘೋಷಣೆ ಹೊರಬೀಳಲಿದೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿದ್ದರಾಮಯ್ಯ ಅವರು ತಮ್ಮ ಎರಡನೇ ಬಾರಿಯ ಮುಖ್ಯಮಂತ್ರಿ ಸ್ಥಾನಕ್ಕೆ ಭಾವುಕ ವಿದಾಯ ಹೇಳಿದ್ದಾರೆ.
























