ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಕಾಂಗ್ರೆಸ್ ನಾಯಕರ ಒಗ್ಗಟ್ಟು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.
ಅವರು ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ನಲ್ಲಿ 14 ಮಂದಿ ಟಕೆಟ್ ಆಕಾಂಕ್ಷಿಗಳ ಪೈಕಿ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಕಾಂಗ್ರೆಸ್ಸಿಗರು ಎಲ್ಲರೂ ಬೆಂಬಲಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅಭ್ಯರ್ಥಿ ಅಶೋಕ್ ಕುಮಾರ್ ರೈ , ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ, ಮೊದಲಾದವರು ಉಪಸ್ತಿತರಿದ್ದರು.